ಬೆಂಗಳೂರು, ಆಗಸ್ಟ್ 24: ಮಹಾನದಿ ಸೀರಿಯಲ್ ಖ್ಯಾತಿಯ ಕನ್ನಡ ಕಿರುತೆರೆ ನಟಿ ರಚನಾ ಮತ್ತು ನಟ ಜೀವನ್ ದುರಂತ ಅಂತ್ಯಕಂಡಿದ್ದಾರೆ. ಕುಕ್ಕೆ ಸುಬ್ರಮಣ್ಯಕ್ಕೆ ಹೋಗಿ ಬೆಂಗಳೂರಿಗೆ ವಾಪಸ್ ಬರುವಾಗ ಅವರಿದ್ದ ವಾಹನ ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಮಹಾನದಿ ಸೀರಿಯಲ್ ಖ್ಯಾತಿಯ ರಚನಾ(23) ಹಾಗೂ ಸಹನಟ ಜೀವನ್(25) ಮೃತಪಟ್ಟಿದ್ದಾರೆ.
ಕಿರುತೆರೆ ನಟಿ ರಚನಾ(23) ಹಾಗೂ ಜೀವನ್(25) ಮೃತ ದುರ್ದೈವಿಗಳು. ತಡರಾತ್ರಿ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ, ನೆಲಮಂಗಳ ಸಮೀಪ ಟಾಟಾ ಸಫಾರಿ ಕಾರು ರಸ್ತೆಬದಿ ನಿಂತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ. ನಟ ಕಾರ್ತಿಕ್ ಹುಟ್ಟು ಹಬ್ಬ ಇದ್ದುದರಿಂದ ಕುಕ್ಕೆ ಸುಬ್ರಮಣ್ಯ ದೇವರ ದರ್ಶನಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಜೊತೆಯಾಗಿ ಪ್ರಯಾಣಿಸುತ್ತಿದ್ದ, ಬಿಎಸ್ ರಂಜಿತ್, ಉತ್ತಮ್, ಹೊನ್ನೇಶ್, ಕಾರ್ತಿಕ್, ಮತಗತು ಎರಿಕ್ ಸಹ ನಟರಿಗೆ ಗಾಯಗಳಾಗಿದ್ದು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರ ಮೃತ ದೇಹಗಳನ್ನ ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ನ್ಯೂಸ್ ಶೇರ್ ಮಾಡಲು ಈಗ ನೇರನ್ಯೂಸ್ ಸುಲಭವಾದ ವ್ಯವಸ್ಥೆ ಮಾಡಿದ್ದು, ನೀವು ಈ ಪುಟದ ಕೆಳಗಡೆ ಇರುವ ವಾಟ್ಸಾಪ್ ಅಥವಾ ಫೇಸ್ ಬುಕ್ ನ ಬಟನ್ ಪ್ರೆಸ್ ಮಾಡಿದರೆ ಸಾಕು, ಈಗಲೇ ಶೇರ್ ಮಾಡಿ ಎಲ್ಲರಿಗೂ ಈ ನ್ಯೂಸ್ ಬಗ್ಗೆ ತಿಳಿಸಿ.
Tags:
Entertainment