ಕಾಂಗ್ರೆಸ್ "ಹಿಂದೂ ಟೆರರಿಸ್ಟ್" ಎಂದಿದ್ದ ಪುರೋಹಿತ್ ಗೆ ಸುಪ್ರೀಂ ಜಾಮೀನು

og:image
ನವದೆಹಲಿ: 2008 ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಲೆಫ್ಟಿನೆಂಟ್ ಕರ್ನಲ್ ಶ್ರೀಕಾಂತ್ ಪ್ರಸಾದ್ ಪುರೋಹಿತ್ ಇವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ ಪುರೋಹಿತ್ ಸುಪ್ರೀಂ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. 2008 ರಲ್ಲಿ ಬಂಧಿತರಾದ ಬಳಿಕ ಅವರು ಒಂಬತ್ತು ವರ್ಷಗಳು ಜೈಲಿನ ಕಂಬಿಗಳ ಹಿಂದೆ ಕಳೆದಿದ್ದಾರೆ. ಅವರು ಸೈನ್ಯದ ಮೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿಲ್ಲ ಎಂದು ಕೋರ್ಟಿಗೆ ತಿಳಿಸಿದ್ದಾರೆ.
ನ್ಯಾಯಮೂರ್ತಿಗಳಾದ ಆರ್. ಕೆ. ಅಗ್ರವಾಲ್ ಮತ್ತು ಎ ಎಂ ಸಪ್ರೆ ಅವರ ಪೀಠವು ಜಾಮೀನು ನೀಡಿ ಅದೇಶ ನೀಡಿದರು.

ಕಳೆದ ವಾರ ವಿಚಾರಣೆಯ ಸಂದರ್ಭದಲ್ಲಿ ಹಿರಿಯ ವಕೀಲ ಹರೀಶ್ ಸಾಲ್ವೆ, ಪುರೋಹಿತ್ ಅವರು ಕಳೆದ ಒಂಬತ್ತು ವರ್ಷಗಳಿಂದ ಜೈಲಿನಲ್ಲಿದ್ದರು ಎಂದು ಹೇಳಿದ್ದಾರೆ ಆದರೆ ಅವರ ವಿರುದ್ಧ ಇನ್ನೂ ಆರೋಪಗಳನ್ನು ರೂಪಿಸಲಾಗಿಲ್ಲ.

ಈ ನ್ಯೂಸ್ ಶೇರ್ ಮಾಡಲು ಈಗ ನೇರನ್ಯೂಸ್ ಸುಲಭವಾದ ವ್ಯವಸ್ಥೆ ಮಾಡಿದ್ದು, ನೀವು ಈ ಪುಟದ ಕೆಳಗಡೆ ಇರುವ ವಾಟ್ಸಾಪ್ ಅಥವಾ ಫೇಸ್ ಬುಕ್ ನ ಬಟನ್ ಪ್ರೆಸ್ ಮಾಡಿದರೆ ಸಾಕು, ಈಗಲೇ ಶೇರ್ ಮಾಡಿ ಎಲ್ಲರಿಗೂ ಈ ನ್ಯೂಸ್ ಬಗ್ಗೆ ತಿಳಿಸಿ.
English Summary:Malegaon blast case: Supreme Court grants bail to Lt Colonel Purohit । NeraNews.com is a leading Kannada daily news websites, with latest updates from Politics, Sports, Crime, Science, Health, Latest Movie update, Matrimonial and other entertaining stories around the world. We have daily 20,000 page visitors.
Previous Post Next Post