ಮೂರು ರಾಜ್ಯಗಳಲ್ಲೂ ಬಿಜೆಪಿ ಪ್ರಬಲ ಸ್ಪರ್ಧಿಯಾಗಿ ಹೊರ ಹೊಮ್ಮಲಿದೆ ಮತ್ತು ತ್ರಿಪುರಾದಲ್ಲಿ 25 ವರ್ಷ ಅಧಿಕಾರ ನಡೆಸಿದ್ದ ಎಡಪಕ್ಷದ ಸರ್ಕಾರವನ್ನು ಬಿಜೆಪಿ ತನ್ನ ತೆಕ್ಕೆ ಸೆಳೆದುಕೊಳ್ಳಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
ಎರಡು ಚುನಾವಣಾ ಪೂರ್ವ ಸಮೀಕ್ಷೆಗಳು ರಾಜ್ಯದಲ್ಲಿ 35 ಸೀಟುಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಊಹಿಸಲಾಗಿದೆ. ಆದಾಗ್ಯೂ, ಮೂರನೇ ಎಕ್ಸಿಟ್ ಪೋಲ್ 60 ಸದಸ್ಯರ ಸಭೆಯಲ್ಲಿ ಸಿಪಿಎಂ ಮತ್ತು ಬಿಜೆಪಿ ನಡುವೆ ನಿಕಟ ಸ್ಪರ್ಧೆಯನ್ನು ಊಹಿಸುತ್ತದೆ.
ಏನಿದ್ದರೂ ಚುನಾವಣಾ ಫಲಿತಾಂಶಕ್ಕಾಗಿ ನಾಳೆಯವರೆಗೂ ಕಾಯಬೇಕಾಗಿದೆ.

